Breaking News

ಸಿಎಂ ಸಿದ್ದರಾಮಯ್ಯಗೆ ಇದು ಕೊನೆಯ ‘ದಸರಾ’ : ಶಾಸಕ ಮಹೇಶ್ ಟೆಂಗಿನಕಾಯಿ ಸ್ಪೋಟಕ ಭವಿಷ್ಯ!

Spread the love

ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ರಾಜಿನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿದ್ದರೆ. ಇನ್ನೊಂದೆಡೆ ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಇದು ಸಿದ್ದರಾಮಯ್ಯ ಅವರಿಗೆ ಕೊನೆಯ ದಸರಾ ಹಾಗೂ ವಿಜಯದಶಮಿ ಆಗಲಿದ್ದು, ಬಳಿಕ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕೊಡುತ್ತಾರೆ ಎಂದು ಸ್ಪೋಟಕ ಭವಿಷ್ಯ ನುಡಿದರು.

 

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ಅವರ ಪಕ್ಷದಲ್ಲಿ ಹಲವರು ಟವಲ್ ಹಾಕಿಕೊಂಡು ಕಾಯುತ್ತಿದ್ದಾರೆ.ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಸಿಲುಕಿದೆ. ವಿಷಯ ಡೈವರ್ಟ್ ಮಾಡಲು ಕಾಂಗ್ರೆಸ್ ಸರ್ಕಾರ ಏನೇನೋ ಮಾಡ್ತಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ದೂರಿದರು.

ಹಳೆ ಹುಬ್ಬಳ್ಳಿ ಗಲಭೆ ಕೆಸ್ ಅನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಇದನ್ನು ನಾವು ಖಂಡಿಸುತ್ತೇವೆ ಯಾವುದೇ ಕಾರಣಕ್ಕೂ ನಾವು ಇದನ್ನು ಬಿಡಲ್ಲ, ಕಾನೂನಾತ್ಮಕವಾಗಿ ಹೋರಾಟ ಮಾಡ್ತೀವಿ. ಸಭೆ ಮಾಡಿ ಹೋರಾಟದ ಸಿದ್ಧತೆ ಮಾಡುತ್ತಿದ್ದೇವೆ ಎಂದು ತಿಳಿಸಿದರು


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ