ನವದೆಹಲಿ, ನ.29- ಕೃಷಿ ಕ್ಷೇತ್ರದ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ರೈತ ಸಮುದಾಯದ ಅವಕಾಶಗಳನ್ನು ಮತ್ತಷ್ಟು ಹೆಚ್ಚಿಸಲಿವೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿರುವ ಮನ್ ಕಿ ಬಾತ್‍ನ 71ನೇ ಸರಣಿಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವ ಹಲವಾರು ಕಾಯ್ದೆಗಳು ಕೃಷಿ ವಲಯವನ್ನು ಉನ್ನತ ಮಟ್ಟಕ್ಕೇರಿಸುವ ಜತೆಗೆ ರೈತರ ಅವಕಾಶಗಳನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಹೇಳಿದರು.
ಎಪಿಎಂಸಿ ತಿದ್ದುಪಡಿ ಸೇರಿದಂತೆ ಹಲವಾರು ಕೃಷಿ ಸಂಬಂತ ಕಾನೂನುಗಳನ್ನು ಬದಲಾವಣೆಯನ್ನು ವಿರೋಸಿ ದೆಹಲಿಯಲ್ಲಿ ಪಂಜಾಬ್‍ನ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಮೋದಿ ಅವರು ಕೃಷಿ ಸುಧಾರಣೆಗಳ ಬಗ್ಗೆ ಮಾತನಾಡಿರುವುದು ಕುತೂಹಲ ಕೆರಳಿಸಿದೆ.
ಸಂಸತ್ ಕೃಷಿ ಸುಧಾರಣೆಗೆ ನಿರ್ದಿಷ್ಟ ರೂಪ ನೀಡಿದೆ. ಇವು ರೈತರನ್ನು ಬಂದ ಮುಕ್ತಗೊಳಿಸಿವೆ. ಹೊಸ ಹಕ್ಕುಗಳು ಅವಕಾಶಗಳನ್ನು ಸೃಷ್ಟಿಸಿವೆ ಎಂದು ಹೇಳಿದರು.