Breaking News

ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು

Spread the love

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ನಕಲಿ ಗಾಂಧಿಗಳ ಪಾದ ನೆಕ್ಕಿದವರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.

“ಪ್ರಲ್ಹಾದ ಜೋಶಿ ಇವತ್ತಿಗೂ ಗೋಡ್ಸೆ ಪೂಜೆ ಮಾಡುತ್ತಾರೆ” ಎಂಬ ಹರಿಪ್ರಸಾದ್ ಹೇಳಿಕೆಗೆ ಜೋಶಿ ತಿರುಗೇಟು ಕೊಟ್ಟರು.

 

ಹುಬ್ಬಳ್ಳಿಯಲ್ಲಿ ಶನಿವಾರ (ಅ.12) ಮಾದ್ಯಮದವರೊಂದಿಗೆ ಮಾತನಾಡುತ್ತ ಹರಿಪ್ರಸಾದ್ ವಿರುದ್ಧ ತೀವ್ರ ಹರಿಹಾಯ್ದರು.

ಈಗಿನ ಕಾಂಗ್ರೆಸ್‌ ನಲ್ಲಿ ಇರುವರೆಲ್ಲಾ ನಕಲಿ ಗಾಂಧಿಗಳು. ಇಂಥ ನಕಲಿ ಗಾಂಧಿಗಳ ಪಾದ ನೆಕ್ಕುವ ಹರಿಪ್ರಸಾದ್, ನಮ್ಮ ಬಗ್ಗೆ ಹೇಳುವುದೇನು ಎಂದು ತರಾಟೆ ತೆಗೆದುಕೊಂಡರು.

ಹರಿಪ್ರಸಾದ್ ಮೊದಲು ತಮ್ಮ ಯೋಗ್ಯತೆಯನ್ನು ಅರಿಯಲಿ. ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಚಡ್ಡಿ-ನಿಕ್ಕರ್ ಬಗ್ಗೆ ಮಾತನಾಡಿದ್ದರು, ಆಗಲೇ ಸಿಎಂ ಇವರನ್ನು ಹೊರ ಹಾಕಲು ತಯಾರಾಗಿದ್ದರು ಎಂಬುದನ್ನು ನೆನಪಿಸುತ್ತಾ ಜಾಡಿಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ