Breaking News

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ

Spread the love

ಮೈಸೂರು: ವಿಶ್ವ ವಿಖ್ಯಾತ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡ ಅದಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಅಂಬಾರಿಯಲ್ಲಿ ವಿರಾಜಮಾನವಾಗಿರುವ ತಾಯಿ ಚಾಮುಂಡಿ ದೇವಿ ವಿಗ್ರಹಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

BREAKING NEWS: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ

ಚಿನ್ನದ ಅಂಬಾರಿಯಲ್ಲಿ ನಾಡ ಅದಿದೇವತೆ ತಾಯಿ ಚಾಮುಂಡೇಶ್ವರಿ ವಿರಾಜಮಾನವಾಗಿದ್ದು, 750ಕೆಜಿ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಗಾಂಭೀರ್ಯದಿಂದ ಮೆರವಣಿಗೆಯಲ್ಲಿ ಸಾಗಿದೆ. ಕ್ಯಾಪ್ಟನ್ ಅಭಿಮನ್ಯು ಆನೆ 5ನೇ ಬಾರಿ ಅಂಬಾರಿಯನ್ನು ಹೊತ್ತು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದೆ. ಅಭಿಮನ್ಯು ಆನೆಗೆ ಕುಮ್ಕಿ ಆನೆಗಳಾದ ಹಿರಣ್ಯ, ಲಕ್ಷ್ಮೀ ಆನೆ ಸೇರಿದಂತೆ ಒಟ್ಟು 9 ಆನೆಗಳು ಸಾಥ್ ನೀಡಿವೆ.

ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ 51 ಸ್ತಬ್ಧಚಿತ್ರಗಳು, ಸಾಂಸ್ಕೃತಿಕ ಕಲಾತಂಡಗಳು ಭಾಗಿಯಾಗಿವೆ. ಅರಮನೆಯಿಂದ ಹೊರಟ ಜಂಬೂ ಸವಾರಿ ಮೆರವಣಿಗೆ ಬನ್ನಿಮಂಟಪದವರೆಗೂ 5 ಕಿ.ಮೀ ದೂರ ಸಾಗಲಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ