Breaking News

ಸಂಭ್ರಮದ ವಿಜಯದಶಮಿ: ರಾವಣನ ಪ್ರತಿಕೃತಿ ದಹನ

Spread the love

ಬೀದರ್: ಶ್ರೀರಾಮಲೀಲಾ ಸೇವಾ ಸಮಿತಿಯಿಂದ ವಿಜಯದಶಮಿ ಅಂಗವಾಗಿ ನಗರದ ಸಾಯಿ ಶಾಲೆಯ ಮೈದಾನದಲ್ಲಿ ಶನಿವಾರ ರಾತ್ರಿ ರಾವಣನ ಪ್ರತಿಕೃತಿ ದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

40 ಅಡಿ ಎತ್ತರದ ರಾವಣನ ಪ್ರತಿಕೃತಿಗೆ ಬಾಣದಿಂದ ಬೆಂಕಿ ಹೊತ್ತ ಬಿಲ್ಲನ್ನು ಬಿಟ್ಟು ದಹಿಸಲಾಯಿತು.

ಎತ್ತರದ ಪ್ರತಿಕೃತಿಯೂ ಪಟಾಕಿಗಳೊಂದಿಗೆ ದಹನಗೊಂಡಿತು. ಜನ ಅದನ್ನು ನೋಡಿ ಸಂಭ್ರಮಿಸಿದರು. ಸೆಲ್ಫಿ, ಛಾಯಾಚಿತ್ರ ತೆಗೆದುಕೊಂಡರು. ವಿವಿಧ ಕಡೆಗಳಿಂದ ಅಪಾರ ಸಂಖ್ಯೆಯ ಜನ ಆಗಮಿಸಿದ್ದರು.

ಪ್ರತಿಕೃತಿ ದಹನಕ್ಕೂ ಮುನ್ನ ರಾಮಲೀಲಾ ನಾಟಕ ಪ್ರಸ್ತುತ ಪಡಿಸಲಾಯಿತು. ಇದು ಜನರನ್ನು ಮಂತ್ರಮುಗ್ಧಗೊಳಿಸಿತು. ಇಡೀ ಸಾಯಿ ಶಾಲೆಯ ಮೈದಾನ, ಮುಖ್ಯರಸ್ತೆಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಬಿಜೆಪಿ ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಬಾಬುವಾಲಿ, ಗುರುನಾಥ ಕೊಳ್ಳೂರು, ಮುಖಂಡರಾದ ಬಸವರಾಜ ಅಷ್ಟೂರ್, ರಾಜಶೇಖರ ನಾಗಮೂರ್ತಿ, ಮಹೇಶ್ವರ ಸ್ವಾಮಿ, ಚಂದ್ರಶೇಖರ ಪಾಟೀಲ ಮುಂತಾದವರು ಪಾಲ್ಗೊಂಡಿದ್ದರು.

ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ವಿಜಯದಶಮಿ ಸಂಭ್ರಮ ಮನೆ ಮಾಡಿತ್ತು. ಊರ ಕಮಾನು, ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ, ಅನ್ನದಾಸೋಹ ಮಾಡಲಾಯಿತು. ಎಲ್ಲೆಡೆ ಸಡಗರ, ಸಮಭ್ರಮದ ವಾತಾವರಣ ಇತ್ತು. ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ಹಬ್ಬದ ಶುಭಾಶಯ ಹೇಳಿದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ