ಮೂಡಲಗಿ: ‘ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಬೆಳಗಾವಿ-ಮನಗೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರವು ಅಕ್ಟೋಬರ್ 16ರಿಂದ ಪ್ರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಹಬ್ಬದಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸುವ ಉದ್ದೇಶದಿಂದ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಬೆಳಗಾವಿ-ಮನಗೂರು (07335) ಎಕ್ಸ್‌ಪ್ರೆಸ್ ಅ.16ರಿಂದ 2025ರ ಮಾರ್ಚ್ 30ರವರೆಗೆ ವಾರದಲ್ಲಿ ನಾಲ್ಕು ಬಾರಿ (ಭಾನುವಾರ, ಮಂಗಳವಾರ, ಬುಧವಾರ ಹಾಗೂ ಶನಿವಾರ) ಸಂಚರಿಸಲಿದೆ. ಮನಗೂರು-ಬೆಳಗಾವಿ (07336) ರೈಲು ಅ.17ರಿಂದ 2025ರ ಮಾರ್ಚ್ 31ರವರೆಗೆ ವಾರದಲ್ಲಿ ನಾಲ್ಕು ಬಾರಿ (ಸೋಮವಾರ, ಬುಧವಾರ, ಗುರುವಾರ ಮತ್ತು ಭಾನುವಾರ) ಸಂಚರಿಸಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Laxmi News 24×7