Breaking News

ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Spread the love

ಗಾಜಿಯಾಬಾದ್‌: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪೊದೆಯೊಂದರಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ಇನ್ಸ್‌ಪೆಕ್ಟರ್‌ವೊಬ್ಬರು ರಕ್ಷಿಸಿದ್ದು, ಬಳಿಕ ಅವರೇ ಈಗ ಅದನ್ನು ದತ್ತು ಪಡೆಯಲು ನಿರ್ಧರಿಸಿದ್ದಾರೆ.

ಪೊದೆಯಲ್ಲಿ ಶಿಶು ಅಳುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಕೂಡಲೇ ದುಢಿಯಾ ಪೀಪಲ್‌ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಪುಷ್ಪೇಂದ್ರ ಸಿಂಗ್‌ ಸ್ಥಳಕ್ಕಾಗಮಿಸಿ ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ಹೆತ್ತವರು ಪತ್ತೆಯಾಗದ ಕಾರಣ, ಸಿಂಗ್‌ ತಮ್ಮ ಪತ್ನಿ ಬಳಿ ಚರ್ಚಿಸಿ ಅಂತಿಮವಾಗಿ ತಾವೇ ದತ್ತು ಪಡೆಯಲು ಮುಂದಾಗಿದ್ದಾರೆ.

ಪುಷ್ಪೇಂದ್ರ ಸಿಂಗ್‌ 2018ರಲ್ಲಿ ವಿವಾಹವಾಗಿದ್ದು, ಇನ್ನೂ ಮಕ್ಕಳಾಗಿಲ್ಲ. ಅಲ್ಲದೆ, ನವರಾತ್ರಿ ವೇಳೆ ಈ ಮಗು ಸಿಕ್ಕಿದ್ದು, ದೇವಿಯ ಆಶೀರ್ವಾದ ಎಂದಿದ್ದಾರೆ. ದತ್ತು ಪಡೆವ ಕಾನೂನು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ