Breaking News

ಅದ್ಧೂರಿ ದಸರಾ, ನವರಾತ್ರಿ ಉತ್ಸವ ಯಶಸ್ವಿ : ಮೈಸೂರು ಜಿಲ್ಲಾಡಳಿತಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ!

Spread the love

ಮೈಸೂರು : ಅದ್ಧೂರಿಯಾಗಿ ಮತ್ತು ಅಷ್ಟೇ ಅಚ್ಚುಕಟ್ಟಾಗಿ ದಸರಾ ಆಯೋಜಿಸಿ, ಇಡೀ ನವರಾತ್ರಿ ಉತ್ಸವವನ್ನು ಯಶಸ್ವಿಯಾಗಿಸಿದ ಮೈಸೂರು ಜಿಲ್ಲಾಡಳಿತಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಂಬಾರಿ ಏರಿದ ತಾಯಿ ಚಾಮುಂಡೇಶ್ವರಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸುವ ಭಾಗ್ಯ ನನ್ನ ಪಾಲಿಗೆ ಒದಗಿ ಬಂದಿರುವುದು ಸಂತಸದ ಜೊತೆಗೆ ಧನ್ಯತಾಭಾವವನ್ನು ಮೂಡಿಸಿದೆ.

ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದ ಸರಳ ದಸರಾವನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ನಿರೀಕ್ಷೆಗಿಂತ ಉತ್ತಮ ಬೆಳೆ ಆಗುವ ಲಕ್ಷಣಗಳೂ ಸ್ಪಷ್ಟವಾಗಿವೆ. ಸಾಲದ್ದಕ್ಕೆ ಈ ಬಾರಿ ಜಿಎಸ್‌ಟಿ ಮತ್ತು ತೆರಿಗೆ ಸಂಗ್ರಹವೂ ನಿರಾಸೆ ಮೂಡಿಸಿಲ್ಲ. ಇದು ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿ ಏರುಗತಿಯಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ. ಎಲ್ಲವೂ ಒಟ್ಟಾಗಿ ದಸರಾ ಸಂಭ್ರಮವನ್ನು ಹೆಚ್ಚಿಸಿದೆ ಎಂದರು.

 

 

ದಸರಾ ಪೂರ್ವಭಾವಿ ಸಭೆಗಳಲ್ಲಿ ಕೊಟ್ಟ ಸೂಚನೆ ಮತ್ತು ತೆಗೆದುಕೊಂಡ ನಿರ್ಣಯಗಳನ್ನು ಜಿಲ್ಲಾಡಳಿತ ಶಿಸ್ತುಬದ್ದವಾಗಿ ಜಾರಿಗೊಳಿಸಿದೆ. ಇದೇ ಮೊದಲ ಬಾರಿಗೆ ಯುವ ದಸರಾವನ್ನು ಚಾಮುಂಡಿ ತಪ್ಪಲಿನ ಉತ್ತನಹಳ್ಳಿಯಲ್ಲಿ ಸಂಘಟಿಸಿ ಲಕ್ಷ ಲಕ್ಷ ಮಂದಿ ಸಂಭ್ರಮಿಸಿದರು. ಶಾಸ್ತ್ರೀಯ ಸಂಗೀತ ಪ್ರಕಾರಗಳಿಂದ, ಸಮಕಾಲೀನ ಸಂಗೀತವನ್ನೂ, ಶಾಸ್ತ್ರೀಯ ನೃತ್ಯದಿಂದ ಸಮಕಾಲೀನ ನೃತ್ಯ ಪ್ರಕಾರಗಳು, 20 ಕ್ಕೂ ಹೆಚ್ಚು ತಂಡಗಳು, ನೂರಾರು ಕಲಾವಿದರು ಯುವ ದಸರಾ ಸಡಗರವನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ