ಭವಿಷ್ಯದ ಮುಂದಿನ ಮುಖ್ಯಮಂತ್ರಿ `ಸತೀಶ್ ಜಾರಕಿಹೊಳಿ’ : ಬೆಳಗಾವಿಯಲ್ಲಿ ರಾರಾಜಿಸಿದ ಬ್ಯಾನರ್!
ಬೆಳಗಾವಿ : ಮುಡಾ ಸಂಕಷ್ಟದ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಪ್ರವಾಸ ಕೈಗೊಂಡಿದ್ದು, ಬೆಳಗಾವಿ ಪ್ರವಾಸದ ಹೊತ್ತಲ್ಲೇ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಕೂಗು ಶುರುವಾಗಿದೆ.
ಹೌದು, ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ಈ ಬೆನ್ನಲ್ಲೇ ಬೆಳಗಾವಿಯ ಚೆನ್ನಮ್ಮ ಸರ್ಕಲ್ ನಲ್ಲಿ ಸತೀಶ್ ಜಾರಕಿಹೊಳಿ ಭವಿಷ್ಯದ ಮುಖ್ಯಮಂತ್ರಿ ಎಂಬ ಬ್ಯಾನರ್ ಹಾಕಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಮಾತನಾಡಿದ್ದ ಸಚಿವ ಸತೀಶ್ ಜಾರಕಿಹೊಳಿ, ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಯ ಬಗ್ಗೆ ಚರ್ಚೆ ನಡೆದಿಲ್ಲ. ಆದರೆ 2028ಕ್ಕೆ ಮುಖ್ಯಮಂತ್ರಿಯಾಗುವ ಇಚ್ಚೆ ನನಗೂ ಇದೆ. ಇದನ್ನು ನನ್ನ ಮಗಳು ಕೂಡ ಹೇಳಿರಬಹುದು. ಆದರೆ ಸದ್ಯ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದು ಸಿಎಂ ಬದಲಾವಣೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯಿಂದ ಸವದತ್ತಿಯ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭ ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.