Breaking News

ಸೋತವರನ್ನು ಮಂತ್ರಿ ಮಾಡಲು ಹೊರಟವರು ಸ್ಥಾನ ತ್ಯಾಗ ಮಾಡಲಿ”: ಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ

Spread the love

ಬೆಂಗಳೂರು, ನ.29- ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಕೊಡಿಸಲು ಪ್ರಯತ್ನಿಸುವವರು ಸಾಧ್ಯವಾದರೆ ತಮ್ಮ ಸ್ಥಾನವನ್ನೇ ತ್ಯಾಗ ಮಾಡಿ ಮಂತ್ರಿ ಮಾಡಿಸಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ.

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪರಾಭವಗೊಂಡವರನ್ನು ಮಂತ್ರಿ ಮಾಡುವುದಾದರೆ ಜನರಿಂದ ಆಯ್ಕೆ ಆದವರು ಏನು ಮಾಡಬೇಕು? ಗೆದ್ದವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಸರಿ.

ಸೋತವರನ್ನು ಮಂತ್ರಿ ಮಾಡಲು ಹೊರಟವರು ಮೊದಲು ತಮ್ಮ ಸ್ಥಾನವನ್ನು ತ್ಯಾಗ ಮಾಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ರಮೇಶ್ ಜಾರಕಿಹೊಳಿ ಹೆಸರು ಹೇಳದೆ ಟಾಂಗ್ ನೀಡಿದರು.

ಸೋತವರನ್ನೇ ಮಂತ್ರಿ ಮಾಡುತ್ತೇನೆ ಎಂದು ಹೇಳಿದರೆ ಜನರಿಂದ ಆಯ್ಕೆಯಾದವರು ಸುಮ್ಮನೆ ಇರಬೇಕ? ಹಾಗೊಂದು ವೇಳೆ ಪರಾಭವಗೊಂಡವರೇ ಮಂತ್ರಿಗಳಾಗುವುದಾದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರನ್ನು ಕರೆತಂದು ಮಂತ್ರಿ ಮಾಡಲಿ, ನಮ್ಮದೇನೂ ಅಭ್ಯಂತರವಿಲ್ಲ ಎಂದರು.

ಯಡಿಯೂರಪ್ಪ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವದ ಕುರಿತು ಯಾರಿಗೂ ಅಪಸ್ವರ ಇಲ್ಲ. ಈ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಇದು ಊಹಾಪೋಹದ ಸುದ್ದಿ ಎಂದರು.

ಸೋತವರಿಗೆ ಮಂತ್ರಿಸ್ಥಾನ ಕೊಡಬಾರದು ಎಂದು ನಾವು ದೆಹಲಿ ನಾಯಕರು, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ತಿಳಿಸಿದ್ದೇವೆ. ಇದು ಕೇವಲ ನನ್ನೊಬ್ಬನ ಅಭಿಪ್ರಾಯವಲ್ಲ. ಬಹುತೇಕ ಶಾಸಕರ ಒಮ್ಮತದ ಅಭಿಪ್ರಾಯವೂ ಇದೇ ಆಗಿದೆ ಎಂದು ಹೇಳಿದರು.

ನಾವು ಕಾಂಗ್ರೆಸ್-ಜೆಡಿಎಸ್‍ನಿಂದ ಬಂದಿರುವವರಿಗೆ ಮಂತ್ರಿಸ್ಥಾನ ಕೊಡಬಾರದು ಎಂದು ಎಲ್ಲೂ ಹೇಳಿಲ್ಲ. ನಮ್ಮ 105 ಶಾಸಕರು, ಜೊತೆಗೆ 17 ಶಾಸಕರು ರಾಜೀನಾಮೆ ಕೊಟ್ಟು ಬಂದಿದ್ದರಿಂದ ಬಿಜೆಪಿ ಅಕಾರಕ್ಕೆ ಬರಲು ಸಾಧ್ಯವಾಯಿತು. ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು ಎಂಬುದನ್ನು ಕೇಂದ್ರ ವರಿಷ್ಠರು ಹಾಗೂ ಸಿಎಂ ಯಡಿಯೂರಪ್ಪ ನಿರ್ಧರಿಸುತ್ತಾರೆ ಎಂದು ರೇಣುಕಾಚಾರ್ಯ ತಿಳಿಸಿದರು.


Spread the love

About Laxminews 24x7

Check Also

ವಿಧಾನಸಭೆಯ ಆವರಣದಲ್ಲಿನ ಚಿತ್ರಪಟಗಳ ಉದ್ಘಾಟನೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್.

Spread the loveಬೆಂಗಳೂರು: ವಿಧಾನಸಭೆ ನಡೆದು ಬಂದ ದಾರಿ ಕುರಿತು ವಿಧಾನಸಭೆಯ ಹೊರ ಆವರಣದಲ್ಲಿ ಅಳವಡಿಸಲಾಗಿರುವ ಚಿತ್ರಪಟಗಳ ಉದ್ಘಾಟನೆಯನ್ನು ಡಿಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ