Breaking News

ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಕಮಿಷನರ್ ನೇತೃತ್ವದಲ್ಲಿ ರೇಡ್

Spread the love

ಲಬುರ್ಗಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.ಈ ವೇಳೆ ಅವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲೂ ಕೂಡ ಕೈದಿಗಳು ಮೊಬೈಲ್ ಗುಟ್ಕಾ ಸೇರಿದಂತೆ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

BREAKING : ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಕಮಿಷನರ್ ನೇತೃತ್ವದಲ್ಲಿ ರೇಡ್ : ಮೊಬೈಲ್ ಸೇರಿದಂತೆ ಹಲವು ವಸ್ತು ಜಪ್ತಿ!

ಈ ಹಿನ್ನೆಲೆಯಲ್ಲಿ ಇಂದು ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ. ಹೌದು ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ. ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ. ಡಿಸಿಪಿ ಕನ್ನಿಕಾ ಹಾಗೂ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಎರಡು ಮೊಬೈಲ್, ಗುಟ್ಕಾ ಪ್ಯಾಕೆಟ್ ಹಾಗೂ 2 ಕಬ್ಬಿಣದ ರಾಡ್ ಗಳನ್ನು ಪೋಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಕಮಿಷನರ್ ಶರಣಪ್ಪ ಮಾತನಾಡಿದ್ದು, ದಾಳಿಯ ವೇಳೆ ಕೆಲವು ಮಹತ್ವದ ಸಾಕ್ಷಿಗಳು ಸಿಕ್ಕಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ ಎಂದು ಕಲಬುರಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ತಿಳಿಸಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ