ಬೆಂಗಳೂರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 2,542 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಸೇರಿ ಒಟ್ಟು 2,975 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

215 ಕಲ್ಯಾಣ ಕರ್ನಾಟಕ ಜಿಲ್ಲೆಗಳ ಹುದ್ದೆಗಳು ಮತ್ತು 2,760 ಉಳಿದ ಜಿಲ್ಲೆಗಳ ಅಭ್ಯರ್ಥಿಗಳದ್ದಾಗಿದೆ. ಅರ್ಹ ಅಭ್ಯರ್ಥಿಗಳು ಅ.21ರಿಂದ ನ.20ರವರೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕೆಪಿಟಿಸಿಎಲ್, ಬೆಸ್ಕಾಂ, ಚೆಸ್ಕಾಂ, ಹೆಸ್ಕಾಂ ಸೇರಿ ವಿವಿಧ ಜಿಲ್ಲೆಗಳ ಹುದ್ದೆಗಳಿವೆ. ಇದರಲ್ಲಿ ಅಭ್ಯರ್ಥಿಗಳು ಒಂದು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಒಂದು ವೇಳೆ ಒಂದಕ್ಕಿಂತ ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಿದ್ದರೆ ಕೊನೆಯ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಅರ್ಜಿ ಶುಲ್ಕವನ್ನು ಹಿಂದಿರುಗಿಸುವುದಿಲ್ಲ.
ಎಸ್‌ಎಸ್‌ಎಲ್‌ಸಿ ಅಥವಾ ಕೇಂದ್ರ ಪಠ್ಯಕ್ರಮದ 10ನೇ ತರಗತಿ ಪರೀಕ್ಷೆಯನ್ನು ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಶೇಕಡಾವಾರು ಅಂಕಗಳ ಜ್ಯೇಷ್ಠತೆ ಆಧಾರದ ಮೇಲೆ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುತ್ತದೆ. ಮೂರು ವರ್ಷದ ತರಬೇತಿ ಇರಲಿದೆ. ತರಬೇತಿ ವೇಳೆ ತೃಪ್ತಿಕರವಾದಲ್ಲಿ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ನಿಗದಿ ಮಾಡಲಾಗುತ್ತದೆ.
Laxmi News 24×7