ಬೆಂಗಳೂರು: ರಾಜ್ಯದ ಬಳ್ಳಾರಿ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.