ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗದಿಂದ ದಿನಾಂಕ ಘೋಷಿಸಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ಇಂದು ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ರಾಜೀವ್ ಕುಮಾರ್ ಅವರು, ಒಂದೇ ಹಂತದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣೆ ನಡೆಸಲಾಗುವುದಾಗಿ ತಿಳಿಸಿದರು.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್.20ರಂದು ಮತದಾನ ನಡೆಯಲಿದೆ. ನವೆಂಬರ್ 23ಕ್ಕೆ ಮತಏಣಿಕೆ ನಡೆದು, ಫಲಿತಾಂಶ ಘೋಷಿಸಲಾಗುತ್ತದೆ ಎಂದರು.
ಹೀಗಿದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಮುಖ ದಿನಾಂಕಗಳು
ಮಹಾರಾಷ್ಟ್ರ 288 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಸಂಬಂಧ ದಿನಾಂಕ 22-10-2024ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ದಿನಾಂಕ 29-10-2024ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 30-10-2024ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 04-11-2024 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 20-11-2024ರಂದು ಮತದಾನ ನಡೆಯಲಿದೆ. ದಿನಾಂಕ 23-11-2024ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ. ದಿನಾಂಕ 25-11-2024ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.