Breaking News

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮುಖಂಡರಿಗೆ ಮುಖಭಂಗ

Spread the love

ಬೆಳಗಾವಿ, ಅ.15: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮುಖಂಡರಿಗೆ ಮುಖಭಂಗವಾಗಿದೆ. ಮೊನ್ನೆಯಷ್ಟೇ ಬೆಳಗಾವಿಯ (Belagavi) ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ (MES) ಮುಖಂಡರು ಸಭೆ ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ‌ನಿರ್ಧಾರ ಮಾಡಿದ್ದರು. ಡಿಸಿ ರೋಷನ್ ಎಚ್ಚರಿಕೆ ನೀಡಿದ್ದರೂ ಕರಾಳ ದಿನ ಆಚರಿಸಿಯೇ ಆಚರಿಸುತ್ತೇವೆ ಎಂದು ಸಭೆಯಲ್ಲಿ ತೀರ್ಮಾನಿಸಿದ್ದರು. ಆದರೆ ಈಗ ಕರಾಳ ದಿನಕ್ಕೆ ಅನುಮತಿ ಇಲ್ಲ ಎಂದು ಎಂಇಎಸ್ ಪುಂಡರಿಗೆ ಕಡ್ಡಿಮುರಿದಂತೆ ಡಿಸಿ ಮೊಹಮ್ಮದ್‌ ರೋಷನ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್‌ ರೋಷನ್ ಅವರು ನವೆಂಬರ್‌ 1 ರಂದು ಎಂಇಎಸ್ ಕರಾಳ‌ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಬೆಳಗಾವಿ ಡಿಸಿ ಕಚೇರಿಯಲ್ಲಿ ಎಂಇಎಸ್ ಮುಖಂಡರಿಗೆ ಬುದ್ಧಿವಾದ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕಿದೆ. ನವೆಂಬರ್. 1ರಂದು ಬಿಟ್ಟು ಪರ್ಯಾಯ ದಿನ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲು ಅವಕಾಶ ಕೊಡ್ತೇನಿ.

ಆದ್ರೆ ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ. ಗಣೇಶೋತ್ಸವ, ಈದ್ ಮಿಲಾದ್ ಸಾಮರಸ್ಯದಿಂದ ಆಚರಣೆ ಮಾಡಿದ್ದೇವೆ. ಹಾಗೇ ನೀವೂ ರಾಜ್ಯೋತ್ಸವ ದಿನ ಬಿಟ್ಟು ಬೇರೆ ದಿನ ಹೋರಾಟ ಮಾಡಿ ಎಂದು ಡಿಸಿ ಮೊಹಮ್ಮದ್‌ ರೋಷನ್ ಬುದ್ಧಿ ಹೇಳಿದ್ದಾರೆ. ಇದಕ್ಕೆ ಎಂಇಎಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು ಡಿಸಿ ಗರಂ ಆಗಿದ್ದಾರೆ. ಭಾಷಾ ಸಾಮಾರಸ್ಯ ಕಾಪಾಡುವುದು ಮುಖ್ಯವಾಗಿದೆ. ಪ್ರತಿ ರಾಜ್ಯೋತ್ಸವ ಸೇರಿದ್ರೇ ಈ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ 2 ಸಾವಿರ ಕೇಸ್ ದಾಖಲಾಗಿವೆ. ನನಗೆ ಜಿಲ್ಲಾಧಿಕಾರಿ ಆಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಿದೆ


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ