ಬೆಳಗಾವಿ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ ಕೆಲವು ಮುಖಂಡರು ಸಭೆ ನಡೆಸಿದರು. ನವೆಂಬರ್ 1ರಂದು ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ.
ಬೆಳಗಾವಿ, ಅ.15: ನವೆಂಬರ್ ತಿಂಗಳು ಬಂದ್ರೆ ಸಾಕು ನಾಡದ್ರೋಹಿ ಎಂಇಎಸ್ (MES) ಪುಂಡರ ಅಟ್ಟಹಾಸ ಹೆಚ್ಚಾಗುತ್ತೆ.
ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ಎಂಇಎಸ್ ಸಿದ್ಧತೆ ನಡೆಸುತ್ತಿದೆ. ಬೆಳಗಾವಿಯ (Belagavi) ಮರಾಠಾ ಮಂಡಲ ಕಾರ್ಯಾಲಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕೆಲವು ಮುಖಂಡರು ಸಭೆ ನಡೆಸಿದರು. ಸಭೆಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ನಿರ್ಧಾರ ಮಾಡಲಾಗಿದೆ.
ಸಭೆಯಲ್ಲಿ ಕರಾಳ ದಿನದ ಮೆರವಣಿಗೆ ನಡೆಸಲು ಎಂಇಎಸ್ ನಿರ್ಧಾರ ಮಾಡಿದೆ. ನವೆಂಬರ್ 1ರಂದು ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ. ಮೆರವಣಿಗೆ ಮಾಡಿದ್ರೆ ಕ್ರಮ ಕೈಗೊಳ್ಳುವುದಾಗಿ ಡಿಸಿ ರೋಷನ್ ಎಚ್ಚರಿಕೆ ನೀಡಿದ್ದಾರೆ. ಡಿಸಿ ಹೇಳಿಕೆ ಬೆನ್ನಲ್ಲೇ ಸಭೆ ಮಾಡಿ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. ನ.1ರಂದು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು ಮತ್ತೊಂದೆಡೆ ಬೆಳಗಾವಿಯಲ್ಲಿ ಕರಾಳ ದಿನ ಆಚರಣೆಗೆ MES ನಿರ್ಧಾರ ಮಾಡಿದೆ. ಮಹಾರಾಷ್ಟ್ರ ನಾಯಕರ ಆಹ್ವಾನಿಸಿ ಶಾಂತಿಗೆ ಭಂಗ ತರಲು MES ಯತ್ನ ಮಾಡುತ್ತಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಹಿನ್ನೆಲೆ MES ಮುಖಂಡರ ಆಹ್ವಾನಕ್ಕೆ ಮಹಾರಾಷ್ಟ್ರ ನಾಯಕರು ಕಾಯ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಲಾಭ ಪಡೆಯಲು ಮಹಾ ನಾಯಕರು ಹುನ್ನಾರ ಮಾಡ್ತಿದ್ದಾರೆ.