Breaking News

ವಿಶ್ವದಾಖಲೆಯಾದ KDC ಡೆಂಟಲ್ ಕೇರ್ ಏಕಕಾಲಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ದಂತ ತಪಾಸಣಾ ಶಿಬಿರಗಳು.

Spread the love

ವಿಶ್ವದಾಖಲೆಯಾದ KDC ಡೆಂಟಲ್ ಕೇರ್ ಏಕಕಾಲಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ದಂತ ತಪಾಸಣಾ ಶಿಬಿರಗಳು.

ಏಕ ಕಾಲದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶಿಬಿರಗಳನ್ನು ಹಮ್ಮಿಕೊಂಡು ಸುಮಾರು 35 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣೆ ನಡೆಸಿದ ಶ್ರೀ ಯೆಡಿಯೂರು ಸಿದ್ದಲಿಂಗೇಶ್ವರ ಚಾರಿಟಬಲ್ ಟ್ರಸ್ಟ್‌ಗೆ ನೋಬಲ್ ವಿಶ್ವದಾಖಲೆ ಸಂಸ್ಥೆಯಿಂದ ಪ್ರಶಸ್ತಿ ಲಭಿಸಿದೆ.

ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ ನಗರಗಳು, ಬೆಂಗಳೂರು ಮತ್ತು ಹುಬ್ಬಳ್ಳಿ ನಗರಗಳಲ್ಲಿ ಏಕ ಕಾಲದಲ್ಲಿ ಕೆ.ಡಿ.ಸಿ ದಂತ ಸಮೂಹ ಮತ್ತು ಎಸ್. ವೈ.ಎಸ್ ಚಾರಿಟೆಬಲ್ ಹಲ್ಲಿನ ಆಸ್ಪತ್ರೆಗಳು ಜಂಟಿಯಾಗಿ ದಂತ ತಪಾಸಣೆ ಉಚಿತಶಿಬಿರಗಳನ್ನು ಹಮ್ಮಿಕೊಂಡಿದ್ದವು. ಈ ಶಿಬಿರಗಳಲ್ಲಿ ಸುಮಾರು 35 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ನಡೆಸಲಾಗಿದೆ. ರಾಮನಗರದ ಯೂನಿವರ್ಸಲ್ ಪಬ್ಲಿಕ್ ಶಾಲೆ, ಸರ್ಕಾರಿ ಪ್ರೌಢಶಾಲೆ, ಭಾರತೀಯ ಸಂಸ್ಕೃತಿ ವಿದ್ಯಾಪೀಠ ಶಾಲೆ ಮತ್ತು ಕಾಲೇಜು, ಚನ್ನಪಟ್ಟಣ ಸೇಂಟ್ ಆನ್ಸ್ ಪ್ರೌಢಶಾಲೆ ಸೇರಿದಂತೆ ವಿವಿಧ ಶಾಲೆಗಳ ಸುಮಾರು 5 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣೆ ಹಮ್ಮಿಕೊಂಡಿದ್ದಾಗಿ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ. ಈ ಮೊದಲು ಏಕಕಾಲದಲ್ಲಿ 26 ಸಾವಿರ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ನಡೆಸಲಾಗಿದ್ದಿತು. ಈ ದಾಖಲೆಯನ್ನು ತಮ್ಮ ಟ್ರಸ್ಟ್ ಮುರಿದಿದೆ. ಹೀಗಾಗಿ ನೋಬಲ್ ವಿಶ್ವದಾಖಲೆ ಸಂಸ್ಥೆಯಿಂದ ಪ್ರಮಾಣ ಪತ್ರ ಲಭಿಸಿದೆ ಎಂದು ಹೇಳಿಕೆಯಲ್ಲಿ ಸಂತಸ ವ್ಯಕ್ತಪಡಿಸಲಾಗಿದೆ.

ದಂತ ತಪಾಸಣಾ ಶಿಬಿರಗಳ ನೇತೃತ್ವವನ್ನು ಡಾ.ನಿರಂಜನ ಪರಮಶೆಟ್ಟಿ, ಡಾ.ಭಾಗ್ಯಲಕ್ಷ್ಮಿ ಫೌಜದಾರ್, ಡಾ.ವಿನಯ್ ಗುಗ್ಗರಿ, ಡಾ.ಸಂಗೀತ, ಡಾ.ಶ್ವೇತಾ, ಡಾ.ಸ್ವಾತಿ, ಡಾ.ರುಪ್ಪ, ಡಾ.ಪಾರ್ಥಿಬನ್ ವಹಿಸಿದ್ದರು. ಒಟ್ಟು 120 ತಜ್ಞ ವೈದ್ಯರು ಈ ಶಿಬಿರಗಳನ್ನು ನಡೆಸಿಕೊಟ್ಟಿದ್ದಾರೆ.

ಮಹೇಶ್ ಮಗದುಮ ಅವರು ನೋಬೆಲ್ ವಿಶ್ವ ದಾಖಲೆ ಪ್ರಮಾಣ ಪತ್ರ ಸ್ವೀಕರಿಸಿದರು.

ಶಿಬಿರಗಳು ಕೇವಲ ತಪಾಸಣೆಗೆ ಸೀಮಿತವಾಗದೆ ದಂತ ರಕ್ಷಣೆಯ ಬಗ್ಗೆ ಹಾಗೂ ತಂಬಾಕು ಪದಾರ್ಥಗಳ ಸೇವನೆಯಿಂದ ಬಾಯಿ ಹಾಗೂ ದೇಹದ ಮೇಲಾಗುವ ಪರಿಣಾಮಗಳ ಬಗ್ಗೆಯೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನೋಬಲ್ ವಿಶ್ವದಾಖಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೆ.ಡಿ.ಸಿ ದಂತ ಸಮೂಹದ ಡಾ.ನಿರಂಜನ ಪರಮಶೆಟ್ಟಿಯವರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿದ್ದಾರೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ