Breaking News

ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

Spread the love

ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಪಡೆಯುವ ಮೂಲಕ ಕೌಶಲ್ಯಾಧಾರಿತ ಉದ್ಯೋಗಾವಕಾಶಗಳು ದೊರಕುವಂತೆ ಮಾಡಬಹುದು. ಈ ಸಂಬಂಧ ಜಿಲ್ಲೆಯ ದೊಡ್ಡ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಪಟ್ಟಿ ರಚಿಸಬೇಕು. ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ ಮೂಲಕ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚಿನ ಉದ್ಯೋಗಗಳು

ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ದೊರಕಲಿವೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಇ.ವಿ ರಮಣರೆಡ್ಡಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಸುಧಾರಣೆಗಳೊಂದಿಗೆ ದೇಶದ ತಳಮಟ್ಟವನ್ನು ತಲುಪಲು ಮತ್ತು ಪ್ರತಿಯೊಬ್ಬರನ್ನು ಸಬಲೀಕರಣಗೊಳಿಸುವ ಸಲುವಾಗಿ, ಕೌಶಲ್ಯ ಅಭಿವೃದ್ಧಿ ಅವಕಾಶಗಳಿಗಾಗಿ ವ್ಯವಸ್ಥೆಯನ್ನು ಬಲಪಡಿಸಲು ಜಿಲ್ಲಾ ಮಟ್ಟದಲ್ಲಿ ಕೌಶಲ್ಯ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮಾತನಾಡಿ, ಮಾರಾಟ ಮತ್ತು ಪ್ರಚಾರಕ್ಕೆ ಸಂಬಂಧಿಸಿದಂತೆ ಎಂಬಿಎ ಪದವಿ ಹೊಂದಿರುವ ವಿದ್ಯಾರ್ಥಿಗಳ ಸಂಖ್ಯೆ ಸಾಕಷ್ಟಿದೆ. ಎಲ್ಲ ಕ್ಷೇತ್ರಗಳಲ್ಲಿ ತರಬೇತಿ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ