Breaking News

ಕೆಎಚ್‌ಡಿಸಿ ಅವ್ಯವಹಾರ ತನಿಖೆ ನಡೆಸಿ: ಶಿವಲಿಂಗ ಟಿರಕಿ

Spread the love

ಗೋಕಾಕ: ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ (ಕೆಎಚ್‌ಡಿಸಿ)ದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು.

ಕೆಎಚ್‌ಡಿಸಿ ಅವ್ಯವಹಾರ ತನಿಖೆ ನಡೆಸಿ: ಶಿವಲಿಂಗ ಟಿರಕಿ

ನೇಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬನಹಟ್ಟಿಯಿಂದ ಹುಬ್ಬಳ್ಳಿವರೆಗೆ ಹಮ್ಮಿಕೊಂಡ ಸ್ವಾಭಿಮಾನಿ ನೇಕಾರರ ಪಾದಯಾತ್ರೆಯ ನೇತ್ರತ್ವ ವಹಿಸಿ, ಇಲ್ಲಿನ ತಹಶೀಲ್ದಾರ್‌ ಕಚೇರಿಗೆ ಸೋಮವಾರ ಮನವಿ ಸಲ್ಲಿಸುವ ಪೂರ್ವ ಮಾತನಾಡಿದರು.

ನಿಗಮದಲ್ಲಿ ನಡೆದ ಅವ್ಯವಹಾರದ ಮರು ತನಿಖೆಯಾಗಬೇಕು. ಅಧಿಕಾರಿಗಳಿಗೆ ಶಿಕ್ಷೆಯಾದರೆ ಸಾಲದು ಅದರಲ್ಲಿ ಭಾಗಿಯಾದ ಜನಪ್ರತಿನಿಧಿಗಳಿಗೂ ಕಠಿಣ ಶಿಕ್ಷೆಯಾಗಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೇಕಾರಿಕೆಯನ್ನು ಉಳಿಸಲು ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ವೃತ್ತಿಪರ ನೇಕಾರರಿಗೆ ಕಾರ್ಮಿಕ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಕಲ್ಲಪ್ಪ ಬಾಗೇವಾಡಿ, ರಮೇಶ ಮರಿಜಾಡರ, ಸೋಮಲಿಂಗ ಬಾಗೇವಾಡಿ, ಅಜೀತ ನವಲಾಯಿ, ರವಿ ಮರಿಜಾಡರ, ಜಗದೀಶ ಗುಲ್ಲ, ಅಶೋಕ ಗುಲ್ಲ ಮತ್ತಿತರರು ಇದ್ದರು.


Spread the love

About Laxminews 24x7

Check Also

ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ;

Spread the love ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ; ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ