ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ನ ಸ್ವಿಚ್ ಒತ್ತಿದಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಅ.15ರ ಮಂಗಳವಾರ ನಡೆದಿದೆ.
ರೇಖಾ ರುದ್ರಪ್ಪ ಹುಡೇದ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಪತಿ, ಮೂವರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.
ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.