ಬೆಂಗಳೂರು: ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ ನಡೆಯಲಿದೆ. ನಡು ಮಧ್ಯಾಹ್ನ ಗ್ರಹಣ ಸ್ಪರ್ಶ ಕಾಲ ಶುರುವಾಗಲಿದ್ದು, ಸೂರ್ಯ ಅಸ್ತಮಿಸುವ ಮುನ್ನವೇ ಗ್ರಹಣದ ಮೋಕ್ಷಕಾಲ ಸಂಭವಿಸುತ್ತದೆ. ಹೀಗಾಗಿ ಈ ಗ್ರಹಣದಲ್ಲಿ ಚಂದ್ರ ಎಲ್ಲಿಯೂ ಕಪ್ಪು ಆಗುವುದಿಲ್ಲ.ಭಾರತದ ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಚಂದ್ರ ಗ್ರಹಣ ಗೋಚರವಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ತ್ರಿಪುರ ಮತ್ತು ಈಶಾನ್ಯ ರಾಜ್ಯಗಳ ಮಧ್ಯಭಾಗದಲ್ಲಿ ಗೋಚರವಗಲಿದೆ.
