Breaking News

ಮತ್ತೆ ನಾನೇ ಈ ರಾಜ್ಯದ ಸಿಎಂ ಆಗುತ್ತೇನೆ: H.D.K.

Spread the love

ಮತ್ತೆ ನಾನೇ ಈ ರಾಜ್ಯದ ಸಿಎಂ ಆಗುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮಂಡ್ಯ: 2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಜನರೇ ಸರ್ಕಾರವನ್ನು ತೆಗೆಯುತ್ತಾರೆ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಜನರು ಬಯಸಿದ್ರೆ ಮತ್ತೆ ಯಾಕೆ ನಾನು ಸಿಎಂ ಆಗಬಾರದು?

ಜನ ಮತ್ತೆ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳುವ ಮೂಲಕ 3ನೇ ಬಾರಿ ಮುಖ್ಯಮಂತ್ರಿಯಾಗುವ ಆಸೆ ಬಿಚ್ಚಿಟ್ಟಿದ್ದಾರೆ.

2028ರವರೆಗೆ ಈ ಸರ್ಕಾರ ನಡೆಯುವುದಿಲ್ಲ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ