ಮುಧೋಳ: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದಿಂದ ಹೆಚ್ಚಿನ ಪ್ರಮಾಣ ನೀರು ಘಟಪ್ರಭಾ ನದಿಗೆ ಹರಿದುಬರುತ್ತಿರುವ ಕಾರಣ ತಾಲೂಕಿನ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಮುಳುಗಿ ಜನಸಂಚಾರ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿವೆ.
ಮಿರ್ಜಿ-ಮಹಾಲಿಂಗಪುರ ಸಂಪರ್ಕ ರಸ್ತೆಯಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದ್ದು ಸದ್ಯ ವಾಹನ ಸಂಚಾರಕ್ಕೆ ಅಡಚಣೆಯಾಗಿಲ್ಲ.
ಪರಿಸ್ಥಿತಿ ಇದೇರೀತಿ ಮುಂದುವರಿದರೆ ಸಂಜೆ ಅಥವಾ ನಾಳೆ ವೇಳೆಗೆ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.
ಜೀರಗಾಳ ಸಮೀಪದ ಬ್ರಿಡ್ಜ ಕಂ ಬ್ಯಾರೇಜ್ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು, ಮುಂಜಾಗೃತವಾಗಿ ಈ ಮಾರ್ಗದ ಸಂಚಾರ ಸ್ಥಗಿತಗೊಂಡಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇದೀಗ ಘಟಪ್ರಭ ನದಿಯು ಮತ್ತೆ ಉಕ್ಕೇರಿ ಹರಿಯುವ ಮುನ್ಸೂಚನೆ ನೀಡಿದೆ.
Laxmi News 24×7