Breaking News

ಕಿಚ್ಚನಿಗೆ ಮಾತೃ ವಿಯೋಗ

Spread the love

ಬೆಂಗಳೂರು: ನಟ, ನಿರೂಪಕ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ಅಸುನೀಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ (ಅ.20) ನಿಧನರಾಗಿದ್ದಾರೆ.

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ.

ಕಿಚ್ಚ ಸುದೀಪ್ ತಾಯಿಯ ಬಗ್ಗೆ ಆಗಾಗ ವೇದಿಕೆ ಮೇಲೆ ಹೇಳಿಕೊಂಡಿದ್ದರು. ಇತ್ತೀಚೆಗಷ್ಟೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಕಿಚ್ಚ ಸುದೀಪ್ ಕುಟುಂಬದಲ್ಲಿ ಶೋಕ ಮನೆ ಮಾಡಿದೆ.

ಸರೋಜಾ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.


Spread the love

About Laxminews 24x7

Check Also

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Spread the love ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ