Breaking News

ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ

Spread the love

ನೇಸರಗಿ(: ಸಮೀಪದ ಕೊಳದೂರ ಹಳ್ಳದಲ್ಲಿ ಬುಧವಾರ ತೇಲಿಹೋಗಿದ್ದ ಯುವಕನ ಮೃತದೇಹ ಭಾನುವಾರ ಪತ್ತೆಯಾಗಿದೆ.

ಬೆಳಗಾವಿ ತಾಲ್ಲೂಕಿನ ಕರಡಿಗುದ್ದಿ ಗ್ರಾಮದ ನಿವಾಸಿ ಯಲ್ಲಪ್ಪ ಬೋರನ್ನವರ(34) ಮೃತರು.

ಸತತ ಮಳೆಯಿಂದಾಗಿ ಬುಧವಾರ ಈ ಹಳ್ಳ ಉಕ್ಕಿ ಹರಿಯುತ್ತಿತ್ತು.

ಆದರೆ, ನೀರಿನ ರಭಸವನ್ನೂ ಲೆಕ್ಕಸದೆ ಯಲ್ಲಪ್ಪ ದಾಟುತ್ತಿದ್ದಾಗ, ಬೈಕ್ ಸಮೇತವಾಗಿ ತೇಲಿಹೋಗಿದ್ದರು.

ಅವರ ಮೃತದೇಹ ಪತ್ತೆಗಾಗಿ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್‌ ಸಿಬ್ಬಂದಿ ಮತ್ತು ನೇಸರಗಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಗ್ರಾಮದ ಜೋಡಗುಡಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಸೇತುವೆ ಕೆಳಗೆ ಭಾನುವಾರ ಮೃತದೇಹ ಪತ್ತೆಯಾಯಿತು. ನೇಸರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ