Breaking News

ಬೆಳಗಾವಿ,ಸೇರಿದಂತೆ 19 ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ?

Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಸೋಮವಾರ(ಅ.21ರಂದು) ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಹೀಗಾಗಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಿದೆ. ಇನ್ನು ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚುವರಿಯಾಗಿ ಶೇ.44ರಷ್ಟು ಮಳೆ ಸುರಿದಿದೆ.

 

ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಕರಾವಳಿ ತೀರದಲ್ಲಿ ಸರ್ಕ್ನೂಲೇಶನ್‌ 5.8 ಕಿ.ಮೀ. ಎತ್ತರದವರೆಗೆ ಇವೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅ.23ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ.

ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಢ, ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ