ಮುಂಬಯಿ: ಬಾಬಾ ಸಿದ್ದಿಕಿ ಹ*ತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರ ಅಪರಾಧ ವಿಭಾಗವು ಭಾನುವಾರ ನವಿ ಮುಂಬೈನಿಂದ ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪದ ಮೇಲೆ ಸ್ಕ್ರ್ಯಾಪ್ ಡೀಲರ್‌ನನ್ನು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೇರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ಆರೋಪಿ ರಾಜಸ್ಥಾನದ ಉದಯಪುರ ಮೂಲದ ಭಗವತ್ ಸಿಂಗ್ ಓಂ ಸಿಂಗ್ (32) ಎಂದು ಗುರುತಿಸಲಾಗಿದ್ದು, ಪ್ರಸ್ತುತ ನವಿ ಮುಂಬೈನಲ್ಲಿ ನೆಲೆಸಿದ್ದ.
ಓಂ ಸಿಂಗ್ ನ ನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅಕ್ಟೋಬರ್ 26 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Laxmi News 24×7