Breaking News

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

Spread the love

ಮುಂಬೈ: ಈಗಾಗಲೇ ಘೋಷಣೆಯಾಗಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ (Maharashtra Assembly Election) ಭಾರತೀಯ ಜನತಾ ಪಕ್ಷವು (BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ರವಿವಾರ (ಅ.20) ಮಧ್ಯಾಹ್ನ ಪ್ರಕಟಿಸಲಾದ ಪಟ್ಟಿಯಲ್ಲಿ 99 ಹೆಸರುಗಳಿವೆ.

ಮಹಾರಾಷ್ಟ್ರ ವಿಧಾನಸಭೆ 288 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 151 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

ಮೊದಲ ಪಟ್ಟಿಯಲ್ಲಿ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಫಡ್ನವೀಸ್‌ ಅವರಿಗೆ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಟಿಕೆಟ್‌ ದೊರೆತರೆ, ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್‌ ಬವಾನ್ಕುಲೆ ಅವರು ಕಮ್ತಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಘಾಟ್‌ಕೋಪರ್ ಪಶ್ಚಿಮದಿಂದ ರಾಮ್ ಕದಮ್, ಚಿಕ್ಲಿಯಿಂದ ಶ್ವೇತಾ ಮಹಾಲೆ ಪಾಟೀಲ್, ಭೋಕರ್‌ ನಿಂದ ಶ್ರೀಜಯ ಅಶೋಕ್ ಚವಾಣ್ ಮತ್ತು ಕಂಕಾವ್ಲಿಯಿಂದ ನಿತೀಶ್ ರಾಣೆ ಪಟ್ಟಿಯಲ್ಲಿ ಹೆಸರಿಸಲಾದ ಇತರ ಪ್ರಮುಖ ನಾಯಕರು. ಶ್ರೀಜಯಾ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಪುತ್ರಿಯಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.

Image


Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ