ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮನೆಗೆ ಹೊಸ ಸದಸ್ಯ ಆಗಮನವಾಗಿದ್ದಾರೆ. ಈ ಸೀಸನ್ ನಲ್ಲಿ ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಾಗಿದೆ.
ಜಗದೀಶ್ ಹಾಗೂ ರಂಜಿತ್ ಅವರನ್ನು ಬಿಗ್ ಬಾಸ್ ನಿಯಮದ ಉಲ್ಲಂಘನೆ ಮಾಡಿದ್ದಕ್ಕಾಗಿ ದೊಡ್ಮನೆಯಿಂದ ಆಚೆ ಕಳುಹಿಸಿದ್ದಾರೆ.
ಈ ಶಾಕ್ ನಲ್ಲಿದ್ದ ಮನೆಮಂದಿಗೆ ಹೊಸ ಸದಸ್ಯರ ಆಗಮನದಿಂದ ಸರ್ಪ್ರೈಸ್ ನೀಡಿದ್ದಾರೆ.
ಸರಿಗಮಪ ರಿಯಾಲಿಟಿ ಶೋ ಮೂಲಕ ಜನಮನ್ನಣೆ ಗಳಿಸಿದ ಕುರಿಗಾಹಿ ಹನುಮಂತ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಪ್ರವೇಶ ಪಡೆದಿದ್ದಾರೆ
ಬಿಗ್ ಬಾಸ್ ಹೊಸ ಅಧ್ಯಾಯದಲ್ಲಿ ಮೊದಲ ವೈಲ್ಡ್ ಕಾರ್ಡ್ ಎಂಟ್ರಿ ಎಂದು ಹನುಮಂತ ಡ್ಯಾನ್ಸ್ ಮಾಡುತ್ತಲೇ ಬಿಗ್ ಬಾಸ್ ಮನೆಗೆ ಬಂದಿದ್ದಾರೆ.
Laxmi News 24×7