ವಯನಾಡ್: ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಅಭ್ಯರ್ಥಿಯನ್ನಾಗಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಶನಿವಾರ(ಅ19) ಘೋಷಿಸಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸ್ಪರ್ಧಿಸಲಿದ್ದಾರೆ.
ವಯನಾಡ್ ಮತ್ತು ರಾಯಬರೇಲಿ ಎರಡರಿಂದಲೂ ಚುನಾಯಿತರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರ ಬಿಟ್ಟ ಕಾರಣ ಚುನಾವಣೆ ಎದುರಾಗಿದೆ.
39 ರ ಹರೆಯದ ನವ್ಯಾ ಹರಿದಾಸ್ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಎರಡು ಬಾರಿ ಕೌನ್ಸಿಲರ್ ಆಗಿದ್ದಾರೆ. ಅವರು 2021 ರಲ್ಲಿ ನಡೆದ ಕೊನೆಯ ವಿಧಾನಸಭಾ ಚುನಾವಣೆಯಲ್ಲಿ ಕೋಝಿಕ್ಕೋಡ್ ದಕ್ಷಿಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿದ್ದರು.
ಕೇರಳದ ಆಡಳಿತಾರೂಢ ಮೈತ್ರಿಕೂಟ ಎಡರಂಗ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಅವರನ್ನು ಅಭ್ಯರ್ಥಿಯಾಗಿ ಹೆಸರಿಸಿದೆ.