ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅ.21) ರಾಜೀನಾಮೆ ಸಲ್ಲಿಸಿದ್ದಾರೆ.
ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಗೆ ಸೋಮವಾರ ಸಂಜೆ ಆಗಮಿಸಿದ ರಾಜೀನಾಮೆ ಪತ್ರ ನೀಡಿದರು.
ಇನ್ನು ರಾಜೀನಾಮೆ ಘೋಷಿಸಿದ ಬಳಿಕ ಮಾತನಾಡಿದ ಅವರು, ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ. ಬಸವರಾಜ ಹೊರಟ್ಟಿ ಅವರ ನಿವಾಸದಲ್ಲಿ ತಮ್ಮ ನಿರ್ಧಾರವನ್ನು ಬಹಿರಂಗವಾಗಿ ತಿಳಿಸಿದ್ದಾರೆ. ಪರಿಷತ್ನ ಸಭಾಪತಿಗೆ ರಾಜೀನಾಮೆ ಪತ್ರ ಕೊಟ್ಟ ಬೆನ್ನಲ್ಲೇ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣಾ ಕಣಕ್ಕಿಳಿಯಲಿದ್ದೇನೆ ಎಂದು ಹೇಳಿದ್ದಾರೆ.