Breaking News

ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.

Spread the love

ಬೆಳಗಾವಿ: ‘ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು  ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.

 

ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಮತ್ತು ಜೀ ಕನ್ನಡ ಸರಿಗಮಪ ತಂಡದವರು ನೃತ್ಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.

ಆಕ್ಸಿಜೆನ್ ಡ್ಯಾನ್ಸ್ ಗ್ರೂಪ್ ವತಿಯಿಂದ ನೃತ್ಯ, ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ, ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಫೈರ್ ಶೋ ಹಾಗೂ ಶಾಡೋ ಆಯಕ್ಟ್ ವಿಶೇಷ ಪ್ರದರ್ಶನ ಕೂಡ ಏರ್ಪಡಿಸಲಾಗಿದೆ.

ಎಲ್ಲರಿಗೂ ಉಚಿತ ಪ್ರವೇಶವಿದೆ. ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ತಗ್ಗುತ್ತಿದೆ ಪೆಟ್ರೋಲ್‌ ಕಾರುಗಳ ಬೇಡಿಕೆ: ಸಿಎನ್‌ಜಿಯಲ್ಲಿ ಬರುತ್ತಿದೆ 3 ಆಕರ್ಷಕ ಎಸ್​ಯುವಿಗಳು

Spread the loveಬೆಂಗಳೂರು (ಜೂ. 19): ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ಆಟೋಮೊಬೈಲ್ ಉದ್ಯಮದಲ್ಲಿ ಸಿಎನ್‌ಜಿ ವಾಹನಗಳ ಬೇಡಿಕೆ ವೇಗವಾಗಿ ಹೆಚ್ಚಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ