Breaking News

ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Spread the love

ಬೆಂಗಳೂರು: ಆಟವಾಡುವಾಗ ಅಣ್ಣ-ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹರ್ಷ ಲೇಔಟ್‌ನ ಜಾನ್ಸನ್‌(13) ಮತ್ತು ಮಹಾಲಕ್ಷ್ಮೀ(11) ಕೆರೆಗೆ ಬಿದ್ದಿರುವ ಅಣ್ಣ-ತಂಗಿ. ಸೋಮವಾರ ಸಂಜೆ ಸುಮಾರು 5.30ಕ್ಕೆ ಕೆಂಗೇರಿ ಬಸ್‌ ನಿಲ್ದಾಣದ ಎದುರಿನ ಕೆರೆಯಲ್ಲಿ ಈ ಘಟನೆ ನಡೆದಿದೆ.

 

ಜಯಮ್ಮ ಎಂಬುವವರ ಮಕ್ಕಳಾದ ಜಾನ್ಸನ್‌, ಮಹಾಲಕ್ಷ್ಮೀ ಕೆರೆಯ ವಾಕಿಂಗ್‌ ಪಾತ್‌ ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳುಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಜಾನ್ಸನ್‌ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಮಕ್ಕಳು ಪತ್ತೆಯಾಗಿಲ್ಲ. ಅಷ್ಟರಲ್ಲಿ ಕತ್ತಲೆ ಆವರಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ಕಾರ್ಯಾಚರಣೆ ಮುಂದುವರಿದ್ದಾರೆ. ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

Spread the loveಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ