Breaking News

ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್‌ 28ಕ್ಕೆ

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Case) ಜೈಲು ಸೇರಿರುವ ನಟ ದರ್ಶನ್‌ (Darshan) ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ.

ಸಿಸಿಹೆಚ್‌ ನ್ಯಾಯಾಲಯದಲ್ಲಿ ದರ್ಶನ್‌ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟಿನಲ್ಲಿ ವಾದವನ್ನು ಮಂಡಿಸಿದ್ದಾರೆ.

 

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.

ದರ್ಶನ್‌ ಪರ ವಕೀಲರು, ದರ್ಶನ್‌ ಅವರ ಆರೋಗ್ಯ ವಿಚಾರವನ್ನು ನ್ಯಾಯಧೀಶರ ಮುಂದೆ ಪ್ರಸ್ತಾಪಿಸಿದ್ದಾರೆ.

ದರ್ಶನ್​ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದು, ಅವರನ್ನು ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್​ಗೆ ಚಿಕಿತ್ಸೆಯ ಅಗತ್ಯವಿದೆ. ಹಾಗಾಗಿ ಜಾಮೀನು ಕೋರುತ್ತಿದ್ದೇವೆ ಎಂದು ನ್ಯಾಯಧೀಶರ ಮುಂದೆ ಹೇಳಿದ್ದಾರೆ.

ಸಿವಿ ನಾಗೇಶ್‌ ಅವರ ವಾದವನ್ನು ಆಲಿಸಿದ ನ್ಯಾಯಧೀಶರು ದರ್ಶನ್‌ ಅವರ ಆರೋಗ್ಯ ಸ್ಥಿತಿಯ ವರದಿಯನ್ನು ಕೇಳಿ, ಆ ಬಳಿಕ ವಿಚಾರಣೆಯನ್ನು ಅಕ್ಟೋಬರ್‌ 28ಕ್ಕೆ ಮುಂದೂಡಿದ್ದಾರೆ.


Spread the love

About Laxminews 24x7

Check Also

ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ

Spread the love ಚಿಕ್ಕೋಡಿ : ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ ರಾಯಬಾಗ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ