Breaking News

ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು; ಓರ್ವನಿಗೆ ಗಾಯ

Spread the love

ದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ.

ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಪಲ್ಲೇದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಂಜುನಾಥ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗದಗ ನಗರದ ಟಿಪ್ಪುಸುಲ್ತಾನ್ ಸರ್ಕಲ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಗ್ಯಾಸ್ ಪೈಪ್ ಲೈನ್ ಕಂಪನಿಯ ಜೆಸಿಬಿ ಸಿಬ್ಬಂದಿ ಎಡವಟ್ಟು ಮಾಡಿದ್ದರಿಂದ ಮಣ್ಣು ಕುಸಿದಿದೆ ಎಂದು ಆರೋಪಿಸಲಾಗಿದೆ. ನನ್ನ ಗಂಡನ ಸಾವಿಗೆ ನಗರಸಭೆ ಅಧಿಕಾರಿಗಳು ಮತ್ತು ಗ್ಯಾಸ್ ಪೈಪ್ ಲೈನ್ ಕಂಪನಿ ಕಾರಣವೆಂದು ಮೃತರ ಪತ್ನಿ ದೂರು ನೀಡಿದ್ದಾರೆ.

ನಗರದ ಕೋರ್ಟ್ ಸರ್ಕಲ್ ಬಳಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ವೇಳೆ, ಗದಗ-ಬೆಟಗೇರಿ ಅವಳಿ ನಗರದ 24×7 ಪೈಪ್‌ಲೈನ್ ಹಾನಿ ಆಗಿತ್ತು. ಶನಿವಾರ ರಾತ್ರಿ ಆ ನೀರಿನ ಪೈಪ್ ದುರಸ್ತಿ ಮಾಡಲು ಈ ಇಬ್ಬರು ಕಾರ್ಮಿಕರು ಮುಂದಾಗಿದ್ದರು. ಏಕಾಏಕಿ ಭೂಮಿ ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ