Breaking News

ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ

Spread the love

ಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ.

 

ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ.

ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದೆ ಅಂತಾ ಕಂಡುಬಂದರೂ ಕೂಡ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುವುದನ್ನ ತನಿಖೆಯ ಬಳಿಕ ತಿಳಿದುಬರಬೇಕಿದೆ.


Spread the love

About Laxminews 24x7

Check Also

ಉತ್ತರ ಭಾರತೀಯ ವ್ಯಾಪಾರಸ್ಥ ರಿಂದ ಕನ್ನಡಿಗರಿಗೆ ಮಹಾ ಮೋಸ; ವಿಜಯಪುರ ದಲ್ಲಿ ವ್ಯಾಪಾರಿಯ ಕರಾಮತ್ತು ಸೆಲ್ಪಿ ವಿಡಿಯೋದಿಂದ ಬಹಿರಂಗ

Spread the love ಉತ್ತರ ಭಾರತೀಯ ವ್ಯಾಪಾರಸ್ಥ ರಿಂದ ಕನ್ನಡಿಗರಿಗೆ ಮಹಾ ಮೋಸ; ವಿಜಯಪುರ ದಲ್ಲಿ ವ್ಯಾಪಾರಿಯ ಕರಾಮತ್ತು ಸೆಲ್ಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ