Breaking News

ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನ

Spread the love

ಬೆಳಗಾವಿ: ಕರ್ನಾಟಕ ರಾಜ್ಯೋತ್ಸ‌ವ ಹಿನ್ನೆಲೆಯಲ್ಲಿ ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಅರ್ಹ ಕನ್ನಡಪರ ಹೋರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷರು, ಕನ್ನಡ ಹೋರಾಟಗಾರರ ಸನ್ಮಾನ ಆಯ್ಕೆ ಸಮಿತಿ ಹಾಗೂ ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.

ಕನ್ನಡ ನಾಡು‌‌ ನುಡಿಗಾಗಿ ಹೋರಾಡಿದ 40 ವರ್ಷ ಮೇಲ್ಪಟ್ಟವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 5 ವರ್ಷಗಳ ಕಾಲ ಕನ್ನಡ‌ಪರ ಹೋರಾಟಗಳ ನೇತೃತ್ವ ವಹಿಸಿದವರು ಅಥವಾ ಮುಂಚೂಣಿಯಲ್ಲಿದ್ದವರು ಮತ್ತು ಯಾವುದೇ ವೈಯಕ್ತಿಕ ಕ್ರಿಮಿನಲ್ ಮೊಕದ್ದಮೆಗಳು‌ ಹೊಂದಿರದವರು ಅರ್ಜಿಗಳನ್ನು‌ ಸಲ್ಲಿಸಬಹುದಾಗಿದೆ.

ಆಸಕ್ತರು, ತಮ್ಮ‌ ಸ್ವ-ವಿವರ ಮಾಹಿತಿ, ಛಾಯಾಚಿತ್ರಗಳು, ಪತ್ರಿಕಾ ವರದಿ ಇನ್ನಿತರ ಲಭ್ಯ ದಾಖಲೆಗಳ ಸಮೇತ ಅಕ್ಟೋಬರ್ 26 ರೊಳಗಾಗಿ “ಉಪ ವಿಭಾಗಾಧಿಕಾರಿಗಳ ಕಚೇರಿ, ನ್ಯಾಯಾಲಯ ಆವರಣ, ಬೆಳಗಾವಿ” ಇಲ್ಲಿ ಸಲ್ಲಿಸಬಹುದು ಎಂದು ಅಧ್ಯಕ್ಷರು, ಕನ್ನಡ ಹೊರಾಟಗಾರರ ಸನ್ಮಾನ ಆಯ್ಕೆ ಸಮಿತಿ ಹಾಗೂ ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ