ರಾಜ್ಯದಲ್ಲಿ ಮೂರು ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಭಾರೀ ನಿರೀಕ್ಷೆ ಮೂಡಿಸಿರುವ ಕ್ಷೇತ್ರ ಮಾತ್ರ ಚನ್ನಪಟ್ಟಣ. ಈ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿಯ ಉಳಿವಿನ ಅಸ್ತಿತ್ವದ ಪ್ರಶ್ನೆ ಹುಟ್ಟುಹಾಕಿದ ಕಾರಣದಿಂದಾಗಿಯೇ ಪಕ್ಷಾಂತರ ಪರ್ವ ನಡಯಲೇ ಬೇಕಾದ ಅನಿವಾರ್ಯ ಎದುರಾಯಿತು.
ಸದ್ಯ ನೇರ ಹಣಾಹಣಿ ಕ್ಷೇತ್ರದಲ್ಲಿ ಕಂಡು ಬಂದಿದ್ದು ಕಾಂಗ್ರೆಸ್ ಕಾರ್ಯಕರ್ತರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹುರಿದುಂಬಿಸಿ ಸೈನಿಕನ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಡಿ.ಕೆ.ಸುರೇಶ್ ಅವರೇ ತಾನು ಕಾಂಗ್ರೆಸ್ ಗೆ ಮರಳಲು ಪ್ರಮುಖ ಕಾರಣ ಎಂದು ಯೋಗೇಶ್ವರ್ ಹೇಳಿಕೊಂಡಿದ್ದಾರೆ.
Laxmi News 24×7