ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಬಳಿ ನಡೆದ ದುರ್ಘಟನೆಯಲ್ಲಿ ಕಾಣೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಗಂಗೇಕೊಳ್ಳದ ಲೋಕೇಶ್ ನಾಯ್ಕ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರಕಾರ ಸಮ್ಮತಿಸಿದೆ.
ಶವ ಸಿಗದ್ದಿದ್ದರೂ ಪರಿಹಾರ ನೀಡಲು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲು ಜಿಲ್ಲಾಡಳಿತದಿಂದ ಮುಖ್ಯ ಕಾರ್ಯ
ದರ್ಶಿಗೆ ಪತ್ರ ಬರೆಯಲಾಗಿತ್ತು. ಕಾಣೆಯಾದ ಇಬ್ಬರು ದುರಂತ ನಡೆದ ಸ್ಥಳದಲ್ಲೇ ಇದ್ದರು. ಅವರು ಕಾಣೆಯಾಗಿರುವುದು ಖಚಿತ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.
ಹಾಗಾಗಿ ವಾರಾಂತ್ಯದಲ್ಲಿ ಜಗನ್ನಾಥ ನಾಯ್ಕ ಹಾಗೂ ಲೋಕೇಶ್ ನಾಯ್ಕ ಕುಟುಂಬಗಳಿಗೆ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಉದಯವಾಣಿಗೆ ತಿಳಿಸಿದ್ದಾರೆ.
Laxmi News 24×7