ಬೆಳಗಾವಿ: ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
ಉಪ ಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲ್ಲುವ ಅವಕಾಶಗಳಿವೆ ಎಂದರು.
ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ವಿಷಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೇಡಿಕೆಯನ್ನು ಪರಿಶೀಲಿಸಲಾಗುವದು ಎಂದು ಸತೀಶ್ ಜಾರಕಿಹೊಳಿ ಹೇಳಿದರು.