ಬೆಳಗಾವಿ: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಅ.23 ರಿಂದ 25 ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.