Breaking News

ವಾಲ್ಮೀಕಿ’ ಸಮುದಾಯಕ್ಕೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Spread the love

ರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

 

ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ ಧಾರವಾಡ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov,in ಮೂಲಕ ನವೆಂಬರ 23, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ : 9482-300-400 ಹಾಗೂ ನಿಗಮದ ವೆಬ್ಸೈನಟ್, ಜಿಲ್ಲಾ ವ್ಯವಸ್ಥಾಪಕರ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

Spread the love ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ