ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 8 ಕಾರ್ಮಿಕರು ಮೃತಪಟ್ಟಿದ್ದಾರೆ.
ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿದೆ.
ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ ಸಂಭವಿಸಿತ್ತು. ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದಿದ್ದಾರೆ. ನಿರ್ಮಾಣ ಹಂತದಲ್ಲಿರುವಾಗಲೇ ಕಟ್ಟಡ ಕುಸಿದಿದ್ದು, ಸದ್ಯ ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರನನ್ನು ಪೊಲೀಸರು ಬಂಧಿಸಿದ್ದಾರೆ
Laxmi News 24×7