ಶಿವಮೊಗ್ಗ: ‘ಮುಡಾ ಹಗರಣದಲ್ಲಿ ತಮ್ಮ ಭ್ರಷ್ಟ ನಾಯಕರನ್ನು ಉಳಿಸಿಕೊಳ್ಳಲು ಹಾಗೂ ಪ್ರಕರಣದ ದಿಕ್ಕನ್ನು ಬೇರೆ ಕಡೆ ತಿರುಗಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನಮ್ಮ ತಾಯಿ ಅವರ ಸಹಜ ಸಾವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸಲ್ಲ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
‘ಆಚಾರವಿಲ್ಲದ ತಮ್ಮ ನಾಲಿಗೆಯನ್ನು ಬೈರತಿ ಸುರೇಶ್, ಕಾಂಗ್ರೆಸ್ ಪಕ್ಷದ ಮೂಲ ರಾಜಕೀಯ ಸಂಸ್ಕೃತಿಯಾದ ಲಜ್ಜೆಗೆಟ್ಟ ರಾಜಕಾರಣಕ್ಕೆ ಬಳಸಿಕೊಂಡಿರುವುದು ಆಕ್ಷೇಪಾರ್ಹ. ಇದು ಅವರ ಸ್ಮರಣೆಗೆ ಮಾತ್ರವಲ್ಲ, ಮಾನವೀಯತೆಯ ಮೌಲ್ಯಗಳಿಗೂ ಧಕ್ಕೆ ತರುವಂತಹ ಕೃತ್ಯ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ವೈಯಕ್ತಿಕ ನೋವನ್ನು ರಾಜಕೀಯ ಪ್ರಯೋಜನಕ್ಕಾಗಿ ಬಳಸುವುದು ಜನತೆಗೂ, ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳಿಗೂ ಕಪ್ಪುಚುಕ್ಕೆ ಇಟ್ಟಂತೆಯೇ ಸರಿ’ ಎಂದು ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7