Breaking News

ಬೆಳಗಾವಿ ಜಿಲ್ಲೆಯ 14 ತಾಲ್ಲೂಕಿನಲ್ಲಿ ಡಿ.22, 27 ರಂದು ಎರಡು ಹಂತದಲ್ಲಿ ಮತದಾನ

Spread the love

ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಪ್ರತಿ  ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಬೆಳಗಾವಿ ಜಿಲ್ಲೆಯ 14 ತಾಲ್ಲೂಕಿನಲ್ಲಿ ಡಿ.22, 27 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊಲದ ಹಂತದಲ್ಲಿ  ಬೆಳಗಾವಿ -57, ಖಾನಾಪುರ -51, ಹುಕ್ಕೇರಿ-52, ಬೈಲಹೊಂಗಲ-33, ಕಿತ್ತೂರು-16, ಗೋಕಾಕ-32, ಮೂಡಲಗಿ-32  ಒಟ್ಟು  261 ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ ಸವದತ್ತಿ-41, ರಾಮದುರ್ಗ-33, ಚಿಕ್ಕೋಡಿ-36, ನಿಪ್ಪಾಣಿ-27, ಅಥಣಿ-41, ಕಾಗವಾಡ-09, ರಾಯಬಾಗ-33 ಒಟ್ಟು 220 ಗ್ರಾಮ ಪಂಚಾಯಿತಿಗಳಿಗೆ ಮತದಾನ ನಡೆಯಲಿದೆ.

ಮೊಲದ ಹಂತದ ಚುನಾವಣೆಗೆ ಡಿ.7 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ. ಡಿ.11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

https://youtu.be/34Ks3HhFgcM

 

ಇನ್ನೂ ಎರಡನೇ ಹಂತದ ಚುನಾವಣೆಗೆ  11 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ. ಡಿ.16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಡಿ.19 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಡಿ.30ರಂದು ಬೆಳಿಗ್ಗೆ 8 ಗಂಟೆಯಿಂದ  ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ  ನಡೆಯಲಿವೆ


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ