Breaking News

ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ: ಸಂಸತ್‌ ಆವರಣದಲ್ಲಿ ಚನ್ನಮ್ಮ ಸ್ಮರಣೆ

Spread the love

ವದೆಹಲಿ: ವೀರ ವನಿತೆ ಕಿತ್ತೂರು ಚನ್ನಮ್ಮ ಜನ್ಮದಿನಾಚರಣೆ ಹಾಗೂ ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷಗಳು ಸಂದ ಸಂದರ್ಭದಲ್ಲಿ ಸಂಸತ್‌ ಆವರಣದಲ್ಲಿ ಚನ್ನಮ್ಮ ಅವರ ಸಾಧನೆಯನ್ನು ಸ್ಮರಿಸಲಾಯಿತು.

ಚನ್ನಮ್ಮ ಪ್ರತಿಮೆಗೆ ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಕೂಡಲ ಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ ಮತ್ತಿತರರು ಪುಷ್ಪನಮನ ಸಲ್ಲಿಸಿದರು.

ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ: ಸಂಸತ್‌ ಆವರಣದಲ್ಲಿ ಚನ್ನಮ್ಮ ಸ್ಮರಣೆ

ವಿ.ಸೋಮಣ್ಣ ಮಾತನಾಡಿ, ‘ಬ್ರಿಟಿಷರ ವಿರುದ್ಧ ಬಂಡಾಯ ಸಾರಿದ ಮೊದಲ ಧೀರ ಮಹಿಳೆ ಚನ್ನಮ್ಮ. ಬ್ರಿಟಿಷರ ವಿರುದ್ಧ ಹೋರಾಟದ ಮೂಲಕ ಸಂಚಲನ ಮೂಡಿಸಿ, ಸ್ವಾತಂತ್ರ‍್ಯ ಹೋರಾಟಕ್ಕೆ ಪ್ರೇರಣೆ ನೀಡಿದರು’ ಎಂದರು.

ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಸಂಸತ್‌ ಆವರಣದಲ್ಲಿ ಪ್ರತಿವರ್ಷವೂ ಕಾರ್ಯಕ್ರಮ ನಡೆಸಬೇಕು. ಈ ಮೂಲಕ ಉತ್ತರ ಭಾರತದ ಜನರಿಗೆ ಚನ್ನಮ್ಮನ ಶೌರ್ಯ ಸಾಹಸ ತಿಳಿಯುವಂತೆ ಆಗಬೇಕು’ ಎಂದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ