ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಎಂಇಎಸ್ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರಾಳ ದಿನಾಚರಣೆ ಆಚರಿಸಲು ಅನುಮತಿ ಕೋರಿ ಬರುವ ಎಂಇಎಸ್ ನಾಯಕರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಈ ಬಾರಿ ಯಾವುದೇ ಕಾರಣಕ್ಕೂ ಕದ್ದು ಮುಚ್ಚಿ ಕರಾಳ ದಿನಾಚರಣೆಗೆ ಅನುಮತಿ ನೀಡಿದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.
Laxmi News 24×7