Breaking News

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ

Spread the love

ಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಇತ್ತೀಚೆಗೆ ಸಂಭವಿಸಿದೆ.

ಬಾಲಕೃಷ್ಣ (44) ಮೃತ ವ್ಯಕ್ತಿ. ಇವರು 25 ದಿನಗಳಿಂದ ಜ್ವರ ವಾಂತಿ ಸಹಿತ ಅನಾರೋಗ್ಯದಿಂದ ಬಳಲುತ್ತಿದ್ದರು.

ಕಾಮಾಲೆ ರೋಗ ಇರಬಹುದು ಎಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳಿಕ ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಕ್ಟೋಬರ್ 20 ರಂದು ಬಾಲಕೃಷ್ಣ ಸಾವನ್ನಪ್ಪಿದ್ದರು. ಬಾಲಕೃಷ್ಣ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ಮೃತರ ಸಹೋದರ ರಾಮಕೃಷ್ಣ ಎಂಬವರು ಅಜೆಕಾರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ - ದೂರು ದಾಖಲು

ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು. ತಾನು ಮತ್ತು ಪ್ರಿಯಕರ ಊಟದಲ್ಲಿ ವಿಷ ಬೆರೆಸಿ ನೀಡಿದ್ದಾಗಿ ತನ್ನ ಸಹೋದರ ಸಂದೀಪ್ ಜೊತೆ ಪ್ರತಿಮಾ ಬಾಯಿ ಬಿಟ್ಟಿದ್ದಾಳೆ.

ಸದ್ಯ ಮೃತರ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಅಜೆಕಾರು ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ.


Spread the love

About Laxminews 24x7

Check Also

ದ್ವೇಷ ಭಾಷಣ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ 8 ವಿಧೇಯಕಗಳಿಗೆ ಸಂಪುಟ ಅಸ್ತು

Spread the loveಬೆಂಗಳೂರು: ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ತಡೆ, ಸಾಮಾಜಿಕ ಬಹಿಷ್ಕಾರ ತಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ