ಹಾಸನ: ಚುನಾವಣೆ ಅಂದ್ರೆ ಏನು ಅಂತ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ರಸ್ತೆ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ತಂದಿರುವ ಅನುದಾನಕ್ಕೆ ಶಾಸಕ ಪ್ರೀತಂಗೌಡ ಗುದ್ದಲಿ ಪೂಜೆ ಮಾಡುತ್ತಿದ್ದಾರೆ. ಎಂಪಿ ಅನುದಾನದಲ್ಲಿ ಎಂಪಿಯವರ ಸಹಿ ಇಲ್ಲದೆ ರಸ್ತೆ ಮಂಜೂರಾತಿ ಆಗಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ಅವರು ತಂದ ಅನುದಾನವನ್ನು ನಾವೇನು ಹೋಗಿ ಪೂಜೆ ಮಾಡಲ್ಲ. ನಾವು ತಂದಿರುವ ಅನುದಾನದಲ್ಲಿ ಈಗಾಗಲೇ ಒಂದು ಬದಿಯಿಂದ ಅರ್ಧ ಕೆಲಸ ಆಗಿದೆ. ಅಂತಹ ಕಾಮಗಾರಿಗೆ ಮತ್ತೊಂದು ಬದಿಯಿಂದ ಪ್ರೀತಂಗೌಡ ಪೂಜೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಹಾಸನ ತಾಲೂಕಿಗೆ ಬಂದಿರೋದು ನಮ್ಮ ದುರಾದೃಷ್ಟ ಎಂದು ವಾಗ್ದಾಳಿ ನಡೆಸಿದರು.
