Breaking News

ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಕೇಸ್ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!

Spread the love

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿದ್ದಂತ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿತ್ತು. ಇಂದು ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿತ್ತು. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿತ್ತು.

2 ಕೇಸ್ ನಲ್ಲೂ ಸತೀಶ್ ಗೆ ಐದು ವರ್ಷ ಜೈಲು ಶಿಕ್ಷೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದೆ. ಒಟ್ಟು 9 ಕೋಟಿ 60 ಲಕ್ಷ ದಂಡವನ್ನು ವಿಧಿಸಿದೆ. ಒಳಸುಂಚು ಪ್ರಕರಣದಲ್ಲಿ 5 ವರ್ಷ ಜೈಲು. ಅಂದಹಾಗೇ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಸಿಬಿಐ ನಿಂದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದಂತ ನ್ಯಾಯಾಲಯವು ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳು ದೋಷಿ ಎಂಬುದಾಗಿ ತೀರ್ಪು ನೀಡಲಾಗಿತ್ತು. ಈಗ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ ನೀಡಿ ಆದೇಶಿಸಿದೆ


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ